ಸುಳ್ಯ, ಮಾ. 23 (DaijiworldNews/TA): ಗಾಂಜಾ ಮಾರಾಟ ಪ್ರಕರಣದಲ್ಲಿ ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸುಳ್ಯ ಠಾಣಾ ಪೊಲೀಸರು ಉತ್ತರ ಪ್ರದೇಶದಲ್ಲಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಉತ್ತರ ಪ್ರದೇಶದ ನಸೀಮ್ ಎಂದು ಗುರುತಿಸಲಾಗಿದೆ. ಈತನನ್ನು ಉತ್ತರ ಪ್ರದೇಶ ರಾಜ್ಯದ ಖಾಜಿಪುರ ಎಂಬಲ್ಲಿಂದ ಬಂಧಿಸಲಾಗಿದ್ದು, ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.