ಕಾಸರಗೋಡು, ಮಾ. 23 (DaijiworldNews/TA): ಕೇರಳ ವಿಧಾನಸಭಾ. ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೋಮವಾರ ಕೊನೆ ದಿನವಾಗಿದ್ದು, ಈ ಹಿನ್ನೆಲೆಯಲ್ಲಿ ಯು ಡಿ ಎಫ್ ಮಂಜೇಶ್ವರ ಕ್ಷೇತ್ರದ ಅಭ್ಯರ್ಥಿ ಎ.ಕೆ. ಎಂ ಅಶ್ರಫ್ ಸೋಮವಾರ ಬೆಳಗ್ಗೆ ಉಪ್ಪಳದಲ್ಲಿರುವ ಮಂಜೇಶ್ವರ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.




ಕಾಸರಗೋಡು ಬಿಜೆಪಿ ಅಭ್ಯರ್ಥಿ ಎಂ.ಎಲ್ ಅಶ್ವಿನಿ ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಕಾಸರಗೋಡು ಕ್ಷೇತ್ರದ ಯು ಡಿ ಎಫ್ ಅಭ್ಯರ್ಥಿ ಕಲ್ಲಟ್ರ ಮಾಹಿನ್ ಹಾಜಿ ಕೂಡಾ ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಎಸ್ ಡಿ ಪಿ ನಿಂದ ಮಂಜೇಶ್ವರ ವಿಧಾನಸಭಾ ಕ್ಷೇತ್ರದಿಂದ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದು, ಎ.ಕೆ ಅಶ್ರಫ್ ಮಂಜೇಶ್ವರ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.