ಮಂಗಳೂರು, ಮಾ. 23 (DaijiworldNews/TA): ನಗರದ ಪಂಪ್ವೆಲ್ ಹಾಗೂ ಎಕ್ಕೂರು ಪರಿಸರದಲ್ಲಿ ಆಟೋರಿಕ್ಷಾದಲ್ಲಿ ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಭೇದಿಸಿದ್ದಾರೆ.

ಮಾ.22ರಂದು ನಡೆದ ಈ ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳಾದ ಹೈದರ್ ಅಲಿಯಾಸ್ ಹೈದರ್ ಆಲಿ(53) ತೊಕ್ಕೊಟ್ಟು ,ಮೊಹಮ್ಮದ್ ಸಜಾದ್ (29) ತೊಕ್ಕೊಟ್ಟು ಮತ್ತು ಜೈಸನ್ ಮೆನೆಜಸ್ (26) ಮೂಲತಃ ಉಡುಪಿ ಜಿಲ್ಲೆಯ ಶಿರ್ವದವನಾಗಿದ್ದು, ಪ್ರಸ್ತುತ ಉಜ್ಜೋಡಿಯ ಫ್ಲ್ಯಾಟ್ನಲ್ಲಿ ವಾಸವಾಗಿದ್ದಾನೆ. ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು, ಆರೋಪಿಗಳು ಆಟೋ ರಿಕ್ಷಾದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ವಶಕ್ಕೆ ಪಡೆದಿದ್ದಾರೆ.
ಬಂಧಿತರಿಂದ 2,50,000 ರೂ. ಮೌಲ್ಯದ 26 ಗ್ರಾಂ ಎಂಡಿಎಂಎ ,ನಗದು37,000 ರೂ.,5 ಮೊಬೈಲ್ ಫೋನ್ಗಳು, ಡಿಜಿಟಲ್ ತೂಕ ಮಾಪನ ಹಾಗೂ ಕೃತ್ಯಕ್ಕೆ ಬಳಸಿದ ಆಟೋ ರಿಕ್ಷಾ ಸಹಿತ ಒಟ್ಟು 4,37,500 ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.