ಕಡಬ, ಏ. 03 (DaijiworldNews/AK): ಕಂಟೇನರ್ ವಾಹನ ಒಂದರಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಆರೋಪಿ ಓರ್ವವನ್ನು ಕಡಬ ಠಾಣಾ ಸಬ್ ಇನ್ಸ್ಪೆಕ್ಟರ್ ಜಂಬೂರಾಜ್ ಮಹಾಜನ್ ನೇತೃತ್ವದ ಪೊಲೀಸರ ತಂಡ ಬಂಧಿಸಿದ್ದಾರೆ. , 18 ಜಾನುವಾರುಗಳನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತ ಆರೋಪಿಯನ್ನು ಹೊಸೂರು ಮೂಲದ ಅಕ್ರಮ್ ಪಾಷಾ ಎಂದು ಗುರುತಿಸಲಾಗಿದೆ. ಶುಕ್ರವಾರ ಬೆಳಗಿನ ಜಾವ ಹಾಸನದಿಂದ ಕೇರಳ ಕಡೆಗೆ ಕಂಟೇನರ್ ವಾಹನ ಒಂದರಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ವಾಹನವನ್ನು ತಡೆದು ನಿಲ್ಲಿಸಿ ಪೊಲೀಸರ ತಂಡ ಓರ್ವನನ್ನು ಬಂಧಿಸಿದ್ದು, ಮತ್ತೋರ್ವ ಪರಾರಿಯಾಗಿದ್ದಾನೆ.
ಕಂಟೇನರ್ ನಲ್ಲಿ ಸುಮಾರು 18 ಜಾನುವಾರುಗಳನ್ನು ಅಮಾನುಷವಾಗಿ ಸಾಗಾಟ ಮಾಡಲಾಗುತ್ತಿರುವುದು ಕಂಡುಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.