ಮಂಗಳೂರು, ಏ. 05 (DaijiworldNews/TA): ಹೊರವಲಯದ ಕೂಳೂರಿನ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಗಾಂಜಾ ಸೇವನೆ ಮಾಡಿದ ಆರೋಪದಲ್ಲಿ ಇಬ್ಬರನ್ನು ಕಾವೂರು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಕುಲಶೇಖರ ನಿವಾಸಿ ನೆಲ್ಸನ್ ಜಾನ್ ಅರೋಜಾ (24) ಮತ್ತು ಜಪ್ಪುಕುಡ್ಪಾಡಿಯ ಅನ್ವಿತ್ (19) ಎಂಬವರನ್ನು ಕಾವೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

ಗಸ್ತು ಕರ್ತವ್ಯದಲ್ಲಿದ್ದ ಪೊಲೀಸರು ಕೂಳೂರಿನ ಹೆದ್ದಾರಿ ಬದಿಯಲ್ಲಿ ಅನುಮಾನಸ್ಪದವಾಗಿ ನಿಂತಿದ್ದ ಇಬ್ಬರನ್ನು ಗಮನಿಸಿ ವಿಚಾರಿಸಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿದೆ. ಆರೋಪಿಗಳ ವಿರುದ್ಧ NDPS ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಕಾವೂರು ಠಾಣೆಯ ಪೊಲೀಸರು ತಿಳಿಸಿದ್ದಾರೆ.