ಮಂಗಳೂರು,ಮೇ. 02 (DaijiworldNews/AK): ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪರವರ ಸಮಾಜ ಸೇವೆಯ 50ನೇ ವರ್ಷಾಚರಣೆಯ ಅಂಗವಾಗಿ ಚಿತ್ರದುರ್ಗದಲ್ಲಿ 'ಬಿ.ಎಸ್.ವೈ ಅಭಿಮಾನೋತ್ಸವ' ಕಾರ್ಯಕ್ರಮ ಆಯೋಜನೆಯಾಗಿದ್ದು, ಮಂಗಳೂರಿನಲ್ಲಿ ವಾಹನಗಳಿಗೆ ಸ್ಟಿಕ್ಕರ್ ಅಂಟಿಸುವ ಅಭಿಯಾನಕ್ಕೆ ದ.ಕ ಜಿಲ್ಲಾ ಬಿಜೆಪಿ ಕಚೇರಿ ಮುಂಭಾಗ ಚಾಲನೆ ದೊರೆಯಿತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಸಂಸದರಾದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ಭರತ್ ಶೆಟ್ಟಿ, ವೇದವ್ಯಾಸ್ ಕಾಮತ್, ಪ್ರಮುಖರಾದ ಪ್ರೇಮಾನಂದ ಶೆಟ್ಟಿ, ತಿಲಕ್ ರಾಜ್ ಕೃಷ್ಣಾಪುರ, ರಮೇಶ್ ಕಂಡೆಟ್ಟು, ಪೂರ್ಣಿಮಾ, ನಂದನ್ ಮಲ್ಯ, ಸುಧೀರ್ ಶೆಟ್ಟಿ ಕಣ್ಣೂರು, ರಮೇಶ್ ಹೆಗ್ಡೆ, ಸಹಿತ ಅನೇಕ ಪ್ರಮುಖರು ಉಪಸ್ಥಿತರಿದ್ದರು.