ಮೂಡುಬಿದಿರೆ,ಮೇ. 09 (DaijiworldNews/AK): ಮಿನಿ ಬಸ್ ಹಿಂದಿನಿಂದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯರು ಸೇರಿದಂತೆ ಸುಮಾರು ಐದು ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪವಾಡಸದೃಶ ರೀತಿಯಲ್ಲಿ ಪಾರಾದ ಘಟನೆ ಮೂಡುಬಿದಿರೆಯ ಸಮಗರಗುಂಡಿಯ ಬಲ್ಲಾಳ್ ಹೋಟೆಲ್ ಬಳಿ ಮೇ 9 ರ ಶನಿವಾರ ಸಂಭವಿಸಿದೆ.

ಅಪಘಾತ ಸಂಭವಿಸಿದಾಗ ಪ್ರಯಾಣಿಕರು ಮೂಡುಬಿದಿರೆಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದರು. ಡಿಕ್ಕಿಯ ಪರಿಣಾಮ ಕಾರಿಗೆ ತೀವ್ರ ಹಾನಿಯಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.