ಉಡುಪಿ, ಮೇ. 15 (DaijiworldNews/AA): ಇಲ್ಲಿನ ನೇಜಾರು ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿದ್ದಾರೆ.

ಅಬ್ದುಲ್ ರೆಹಮಾನ್ (12) ಮೃತ ಬಾಲಕ.
ನೇಜಾರಿನ ಜ್ಯೋತಿ ನಗರದ ಆರನೇ ಕ್ರಾಸ್ ಬಳಿ ಈ ಘಟನೆ ಸಂಭವಿಸಿದೆ. ಬಾಲಕನು ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ತಕ್ಷಣವೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ದುರದೃಷ್ಟವಶಾತ್, ಆಸ್ಪತ್ರೆಗೆ ತಲುಪುವಷ್ಟರಲ್ಲಿ ಬಾಲಕ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.
ಮೃತ ಅಬ್ದುಲ್ ರೆಹಮಾನ್ ಸಾಲಿಹಾತ್ ಶಿಕ್ಷಣ ಸಂಸ್ಥೆಯ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದನು. ಬಾಲಕನ ಅಕಾಲಿಕ ನಿಧನಕ್ಕೆ ಸಂಸ್ಥೆಯ ಆಡಳಿತ ಮಂಡಳಿ, ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.