ಬಂಟ್ವಾಳ, ಮೇ. 18 (DaijiworldNews/TA): ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ.



ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ವೇಳೆ ಮೆಲ್ಕಾರ್ ಎಂಬಲ್ಲಿ ಬೆಂಕಿ ಹತ್ತಿಕೊಂಡಿದೆ. ಗುಜಿರಿ ಸಾಮಾಗ್ರಿಗಳ ಸಾಗಾಟದ ಲಾರಿ ಇದಾಗಿದ್ದು , ಲಾರಿಯಲ್ಲಿ ತುಂಬಿಸಿದ್ದ ಗುಜರಿ ಸಾಮಾಗ್ರಿಗಳು ಬೆಂಕಿಗೆ ಆಹುತಿಯಾಗಿದೆ.
ಬಂಟ್ವಾಳ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಗುಜಿರಿಯಲ್ಲಿದ್ದ ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ಆಗಿರುವ ಸಾಧ್ಯತೆ ಇದೆ ಹಾಗಾಗಿ ಬೆಂಕಿ ಹೊತ್ತಿಕೊಂಡಿದೆ ಎಂದು ವರದಿಯಾಗಿದೆ.