ಮಂಗಳೂರು, ಮೇ. 20 (DaijiworldNews/AK): ಹೈಕೋರ್ಟ್ ಸಂಚಾರಿ ಪೀಠದ ಕಟ್ಟಡಕ್ಕೆ ಬೇಕಾದ ಎಲ್ಲಾ ಮೂಲಭೂತ ಸೌಕರ್ಯವನ್ನು ಒದಗಿಸಿಕೊಡುವುದಾಗಿ ಹೈಕೋರ್ಟ್ ಸಂಚಾರಿ ಪೀಠದ ಸಂಚಾಲಕರಾದ ಹಾಗೂ ವಿಧಾನ ಪರಿಷತ್ ಶಾಸಕರಾದ ಐವನ್ ಡಿʼಸೋಜಾರವರು ಇಂದು ಮಾನ್ಯ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿಯವರನ್ನು ಭೇಟಿ ಮಾಡಿ ಮನವಿಯನ್ನು ಸಲ್ಲಿಸಿದರು.

ಶಾಸಕರ ಮನವಿಗೆ ಸ್ಪಂದಿಸಿ ಹೈಕೋರ್ಟ್ ಸಂಚಾರಿ ಪೀಠದ ಕಟ್ಟಡಕ್ಕೆ ಬೇಕಾದ ಎಲ್ಲಾ ಮೂಲಭೂತ ಸೌಕರ್ಯವನ್ನು ಒದಗಿಸಿಕೊಡುವುದಾಗಿ ಸಚಿವರು ಈ ಸಂದರ್ಭದಲ್ಲಿ ಭರವಸೆ ನೀಡಿದ್ದಾರೆ.
ಹೈಕೋರ್ಟ್ ಸಂಚಾರಿ ಪೀಠವನ್ನು ಸ್ಥಾಪಿಸಲು ಜಿಲ್ಲಾಧಿಕಾರಿಯವರ ಹಳೆ ಕಟ್ಟಡದಲ್ಲಿ ಸ್ಥಾಪಿಸಲು ನಿರ್ಧರಿಸಿದ್ದು, ಕಟ್ಟಡ ದುರಸ್ಥಿಗೆ ಜಿಲ್ಲಾಧಿಕಾರಿಯವರು ಸುಮಾರು ಮೂರು ಕೋಟಿ ರೂಪಾಯಿ ಖರ್ಚು ಆಗಬಹುದು ಎಂದು ತಿಳಿಸಿದ್ದಾರೆ.