ಬೆಳ್ಳಾರೆ, ಮೇ. 31 (DaijiworldNews/TA) : ತೋಟವೊಂದರಲ್ಲಿ ಅಕ್ರಮ ಗೋಹತ್ಯೆ ನಡೆಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಕೆ ಅಬ್ದುಲ್ ರಫೀಕ್(37), ಅದ್ರಾಮ ಮಂತೂರು(41) ಮತ್ತು ಅಬ್ದುಲ್ ಖಾದರ್ ಪಣೆಮಜಲು (57) ಬಂಧಿತ ಆರೋಪಿಗಳು.

ಅಕ್ರಮ ಗೋಹತ್ಯೆ ನಡೆಯುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿ ಮೂವರನ್ನು ಹಿಡಿದು ವಿಚಾರಣೆ ನಡೆಸಲಾಗಿದೆ. ವಿಚಾರಣೆಯ ವೇಳೆ ಯಾವುದೇ ಪರವಾನಿಗೆ ಪಡೆಯದೇ ಅಕ್ರಮವಾಗಿ ಗೋ ಹತ್ಯೆ ನಡೆಸಿ ಮಾಂಸ ಮಾಡುತ್ತಿರುವುದು ದೃಢಪಟ್ಟಿದ್ದು, ಸ್ಥಳದಲ್ಲಿದ್ದ ಜಾನುವಾರು ಮಾಂಸ, ಇತರೆ ಸೊತ್ತುಗಳನ್ನು ಹಾಗೂ ಆರೋಪಿಗಳನ್ನು ವಶಕ್ಕೆ ಪಡೆದು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಲಾಗಿದೆ.