ಬಂಟ್ವಾಳ, ಮೇ. 31 (DaijiworldNews/TA) : ರಾಜ್ಯದೆಲ್ಲೆಡೆ ಶಾಲಾರಂಭಕ್ಕೆ ಸಕಲ ಸಿದ್ದತೆ ಬಹುತೇಕ ಪೂರ್ಣಗೊಂಡಿದ್ದು, ಬಂಟ್ವಾಳ ಪೊಳಲಿಯ ಸರಕಾರಿ ಪ್ರೌಢಶಾಲೆ ಸದ್ಯ ಹಳೆ ವಿದ್ಯಾರ್ಥಿಗಳಿಂದ ಮದುವಣಗಿತ್ತಿಯಂತೆ ಅಲಂಕೃತಗೊಂಡಿದೆ.

ಇನ್ನು ಶಾಲಾ ಪ್ರಾರಂಭೋತ್ಸವಕ್ಕೆ ಸಕಲ ಸಿದ್ಧತೆಯೊಂದಿಗೆ ವಿದ್ಯಾರ್ಥಿಗಳನ್ನು ಬರಮಾಡಿಕೊಳ್ಳಲು ಆತುರದಿಂದ ಕಾಯುತ್ತಿದ್ದೇವೆ ಎಂದು ಶಾಲಾ ಮುಖ್ಯ ಶಿಕ್ಷಕರಾದ ಸುಬ್ರಾಯ ಪೈ ಮತ್ತು ಎಸ್ಡಿಎಂಸಿ ಅಧ್ಯಕ್ಷ ವೆಂಕಟೇಶ ನಾವಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2025 26 ನೇ ಸಾಲಿನಲ್ಲಿ 10ನೇ ತರಗತಿಯಲ್ಲಿ ಶೇಕಡ 100 ಗಳಿಸಿದ ಈ ಶಾಲೆಯು ಮುಂದಿನ ದಿನಗಳಲ್ಲಿಯೂ ಈ ಸಾಧನೆಯನ್ನು ಮುಂದುವರಿಸುವುದಾಗಿ ತಿಳಿಸಿದ್ದಾರೆ. ಹಳೆ ವಿದ್ಯಾರ್ಥಿಗಳ ಈ ಸಹಕಾರಕ್ಕೆ ಶ್ರೀ ಪೊಳಲಿ ಡೆಕೋರೇಟರ್ಸ್ ನ ದೀಕ್ಷಿತ್ ಮತ್ತು ತಂಡಕ್ಕೆ ಧನ್ಯವಾದಗಳು ತಿಳಿಸಿದ್ದಾರೆ.