ಉಡುಪಿ, ಮೇ. 31 (DaijiworldNews/AA): ಫ್ರಾನ್ಸಿಸ್ ದಾಂತಿ ಸ್ಮಾರಕ ಪ್ರತಿಷ್ಠಾನ ಮತ್ತು ಕೆಥೋಲಿಕ್ ಸಭಾ ಉಡುಪಿ ಪ್ರದೇಶ ಜಂಟಿ ಆಶ್ರಯದಲ್ಲಿ ರಾಜ್ಯ ಮಟ್ಟದ ದಿ. ಫ್ರಾನ್ಸಿಸ್ ದಾಂತಿ ಸ್ಮಾರಕ ಸಾಹಿತ್ಯ ಪುರಸ್ಕಾರ- 2025ಕ್ಕೆ ಕವಯಿತ್ರಿ ಫ್ಲಾವಿಯಾ ಅಲ್ಬುಕರ್ಕ್ ಪುತ್ತೂರು ಅವರ 'ಸಖಿ ಸೂಸಿದ ಸೌಗಂಧ' ಕವನ ಸಂಕಲನ ಆಯ್ಕೆಯಾಗಿದೆ.

ಫ್ಲಾವಿಯಾ ಅಲ್ಬುಕರ್ಕ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನವರು. ಅವರು ಕನ್ನಡ ಸಾಹಿತ್ಯದಲ್ಲಿ ಅಭಿರುಚಿ ಹೊಂದಿದವರಾಗಿದ್ದಾರೆ.
ಪ್ರಶಸ್ತಿಯು 25,000 ರೂ. ನಗದು, ಸ್ಮರಣಿಕೆ ಹೊಂದಿದೆ. ಜೂ.4ರಂದು ಬೆಳಗ್ಗೆ 10 ಗಂಟೆಗೆ ಶಿರ್ವ ಆರೋಗ್ಯ ಮಾತಾ ಚರ್ಚ್ ಸಭಾಂಗಣದಲ್ಲಿ ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂ. ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪುರಸ್ಕಾರ ಸಮಿತಿಯ ಆಲ್ಫೋನ್ಸ್ ಡಿಕೋಸ್ತಾ ಮಾಹಿತಿ ನೀಡಿದ್ದಾರೆ.