ಮಂಗಳೂರು, ಜು. 11 (DaijiworldNews/AA): ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಸ್ ಕಂಡಕ್ಟರ್ ಓರ್ವನನ್ನು ಪೊಲೀಸರು ದಸ್ತಗಿರಿ ಮಾಡಿದ್ದಾರೆ.

ಉಪ್ಪಿನಂಗಡಿ, ಕರ್ವೇಲು ನಿವಾಸಿ ಇರ್ಫಾನ್ (32) ದಸ್ತಗಿರಿಯಾದ ಆರೋಪಿ. ಈತ ಮಂಗಳೂರು-ವಿಟ್ಲ ಮಾರ್ಗದ ಖಾಸಗಿ ಬಸ್ಸೊಂದರಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ.
ಆರೋಪಿಯು ಮಂಗಳೂರು - ವಿಟ್ಲ ಮಾರ್ಗದ ಬಸ್ ಕಂಡಕ್ಟರ್ ಆಗಿದ್ದು, ಜು.9 ರಂದು ಸಂಜೆ ಸುಮಾರು 5:00 ಗಂಟೆಗೆ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿರಿಸಿಕೊಂಡು ಬಸ್ಸಿನಲ್ಲಿ ಅಸಭ್ಯವಾಗಿ ವರ್ತಿಸಿ, ಅಶ್ಲೀಲ ಸನ್ನೆಗಳನ್ನು ಮಾಡಿದ್ದಾನೆ. ಜೊತೆಗೆ ಹಿಂದಿನ ಸೀಟಿಗೆ ಬಾ ಎಂದು ವಿದ್ಯಾರ್ಥಿನಿಯರನ್ನು ಕರೆದು ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.
ಆರೋಪಿಯ ವಿರುದ್ಧ ಮಂಗಳೂರು ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಜು. 10 ರಂದು ಪೊಲೀಸರು ದಸ್ತಗಿರಿ ಮಾಡಿದ್ದು, ತನಿಖೆ ಕೈಗೊಂಡಿದ್ದಾರೆ.