ಉಡುಪಿ, ಜು. 11 (DaijiworldNews/AA): ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಕರ್ತವ್ಯ ನಿರ್ವಹಣೆಯಲ್ಲಿ ಲೋಪವೆಸಗುವ ಬೂತ್ ಮಟ್ಟದ ಅಧಿಕಾರಿಗಳ ವಿರುದ್ಧ ಜಿಲ್ಲಾಡಳಿತಕ್ಕೆ ದೂರು ಬಂದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಎಚ್ಚರಿಸಿದ್ದಾರೆ.







ಶುಕ್ರವಾರ ಉಡುಪಿ ಪ್ರೆಸ್ ಕ್ಲಬ್ನಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಪ್ರೆಸ್ ಕ್ಲಬ್ ಸಮಿತಿಯಿಂದ ಆಯೋಜಿಸಿದ್ದ ಮಾಸಿಕ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
* ಆಗಸ್ಟ್ 5 ರಂದು ಮತದಾರರ ಕರಡು ಪಟ್ಟಿ ಪ್ರಕಟವಾಗಲಿದ್ದು, ಪಟ್ಟಿಯಲ್ಲಿ ಹೆಸರು ಇಲ್ಲದವರು ಮಾತ್ರ 11 ಮಾನ್ಯ ದಾಖಲೆಗಳ ಪೈಕಿ ಒಂದನ್ನು ಸಲ್ಲಿಸಬೇಕು. ಈಗಾಗಲೇ ಪಟ್ಟಿಯಲ್ಲಿ ಹೆಸರು ಇರುವವರು ಯಾವುದೇ ದಾಖಲೆ ಸಲ್ಲಿಸುವ ಅಗತ್ಯವಿಲ್ಲ.
* ಬಿಎಲ್ಒಗಳು ಪ್ರತಿ ಮನೆಗೆ ಭೇಟಿ ನೀಡಿ ಅರ್ಜಿಗಳನ್ನು ವಿತರಿಸಲು ಮತ್ತು ಸಂಗ್ರಹಿಸಲು ಪದೇಪದೇ ಸೂಚಿಸಲಾಗಿದೆ. ಕೆಲಸದಲ್ಲಿ ವಿಳಂಬ ಮಾಡುತ್ತಿರುವ ಅಧಿಕಾರಿಗಳಿಗೆ ಈಗಾಗಲೇ ನೋಟಿಸ್ ಜಾರಿ ಮಾಡಲಾಗಿದೆ.
* ಕರಡು ಪಟ್ಟಿಯಲ್ಲಿ ಹೆಸರು ಕೈಬಿಟ್ಟಿದ್ದರೆ, ಸ್ವೀಕೃತಿ ಪ್ರತಿ ಬಳಸಿ ಮತ್ತೊಂದು ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 7 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟವಾಗಲಿದೆ.
* ಸಾರ್ವಜನಿಕರು ಬೂತ್ ಮಟ್ಟದ ಅಧಿಕಾರಿಗಳ ಕುರಿತು ದೂರು ನೀಡಲು ತಾಲೂಕು ಮಟ್ಟದ ಅಧಿಕಾರಿಗಳು, ಸೆಕ್ಟರ್ ಅಧಿಕಾರಿಗಳು ಅಥವಾ ತಹಶೀಲ್ದಾರ್ ಅವರನ್ನು ಸಂಪರ್ಕಿಸಬಹುದು.