ಬಂಟ್ವಾಳ, ಜು. 16 (DaijiworldNews/TA): ಗದ್ದೆ ನಾಟಿ ಕುರಿತು ಅರಿವು ಮೂಡಿಸುವ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ಇನ್ಸ್ಟಿಟ್ಯೂಷನ್ ಆಫ್ ವಿದ್ಯಾನಿಕೇತನ ಶಾಲೆಯಲ್ಲಿ ಮಕ್ಕಳಿಗೆ ಗದ್ದೆ ನಾಟಿ ಹಾಗೂ ಕೃಷಿಯ ಮಹತ್ವದ ಕುರಿತು ಪ್ರಾಯೋಗಿಕವಾಗಿ ತಿಳಿಸಿಕೊಡಲಾಯಿತು.

ಈ ವಿದ್ಯಾಸಂಸ್ಥೆಯು ಬಂಟ್ವಾಳ ಅಪ್ಪಣ್ಣ ಬಾಳಿಗ ಎಜುಕೇಶನ್ ಟ್ರಸ್ಟ್ ವತಿಯಿಂದ ನಡೆಸಲ್ಪಡುತ್ತಿದೆ. ಕಾರ್ಯಕ್ರಮದಲ್ಲಿ ಕೃಷಿಕರಾದ ದಯಾನಂದ ಪೆರಾಜೆ ಅವರು ಗದ್ದೆ ನಾಟಿಯ ವಿಧಾನ, ಭತ್ತದ ಕೃಷಿಯ ಮಹತ್ವ ಹಾಗೂ ರೈತರ ಶ್ರಮದ ಬಗ್ಗೆ ಮಕ್ಕಳಿಗೆ ತಿಳಿಸಿದರು.
ಮಕ್ಕಳು ಆಸಕ್ತಿಯಿಂದ ಭಾಗವಹಿಸಿ ಕೃಷಿಯ ಕುರಿತು ಅಮೂಲ್ಯ ಮಾಹಿತಿಯನ್ನು ಪಡೆದರು. ಈ ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕಿ, ಶಿಕ್ಷಕಿಯರು, ಸಹಾಯಕಿ ಶಿಕ್ಷಕಿಯರು ಹಾಗೂ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.