ಸುಳ್ಯ, ಜು. 17 (DaijiworldNews/TA): ವಿಧಾನಸೌಧದಲ್ಲಿ ನಡೆದ KFD ಸಭೆಯಲ್ಲಿ ಸುಳ್ಯ ಶಾಸಕಿ ಭಾಗೀರತಿ ಮುರುಳ್ಯ ಅವರು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿನ ವೈದ್ಯರು ಮತ್ತು ಸಿಬ್ಬಂದಿ ಕೊರತೆಯನ್ನು ಪ್ರಸ್ತಾಪಿಸಿ, 24×7 ಸೇವೆ ಒದಗಿಸುವಂತೆ ಒತ್ತಾಯಿಸಿದರು.


ಸಭೆಯ ಬಳಿಕ ಸಚಿವರಿಗೆ ಮನವಿ ಸಲ್ಲಿಸಿದ ಅವರು, ಸುಳ್ಯ ಕ್ಷೇತ್ರದ ಎರಡು ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಡಯಾಲಿಸಿಸ್ ಯಂತ್ರಗಳ ಕೊರತೆಯಿಂದ ರೋಗಿಗಳು ಪುತ್ತೂರು ಅಥವಾ ಮಂಗಳೂರಿಗೆ ಅಲೆಯುತ್ತಿರುವುದನ್ನು ಹಾಗೂ ರಕ್ತನಿಧಿ ಕೇಂದ್ರವಿಲ್ಲದೆ ಖಾಸಗಿ ಆಸ್ಪತ್ರೆಗಳನ್ನು ಅವಲಂಬಿಸಿರುವುದನ್ನು ವಿವರಿಸಿದರು.
ಈ ಹಿನ್ನೆಲೆಯಲ್ಲಿ, ಕ್ಷೇತ್ರದ ರೋಗಿಗಳಿಗೆ ಸ್ಥಳೀಯವಾಗಿಯೇ ಉತ್ತಮ ಚಿಕಿತ್ಸೆ ಸಿಗುವಂತಾಗಲು ಡಯಾಲಿಸಿಸ್ ಯಂತ್ರಗಳು, ಬ್ಲಡ್ ಬ್ಯಾಂಕ್ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ತಕ್ಷಣವೇ ವಿಶೇಷ ಅನುದಾನ ಬಿಡುಗಡೆ ಮಾಡಬೇಕೆಂದು ಶಾಸಕರು ವಿನಂತಿಸಿದ್ದಾರೆ.