ಮೂಡುಬಿದಿರೆ, ಜು. 18 (DaijiworldNews/AK): ತೆಂಕಮಿಜಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಪ್ಪದ ಕುಮೇರಿವನಲ್ಲಿರುವ ತನ್ನ ಮನೆಯಲ್ಲಿ ಶುಕ್ರವಾರ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ಶುಕ್ರವಾರ ನಡೆದಿದೆ.

ಮೃತರನ್ನು ಮಿಜಾರ್ ಬಳಿಯ ನಮೈಲೆ ನಿವಾಸಿ ಗುರು ಭಟ್ ಅವರ ಪತ್ನಿ ಸ್ನೇಹಾ ಎಂದು ಗುರುತಿಸಲಾಗಿದೆ. ಅವರು ಪತಿ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಆತ್ಮಹತ್ಯೆಯ ಹಿಂದಿನ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ. ಮಾಹಿತಿ ಪಡೆದ ಮೂಡಬಿದ್ರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಘಟನೆಯ ಕುರಿತು ಹೆಚ್ಚಿನ ತನಿಖೆ ಆರಂಭಿಸಿದ್ದಾರೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ರೀತಿಯ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಟೋಲ್ ಫ್ರೀ ಸಹಾಯವಾಣಿ ಸಂಖ್ಯೆ 9152987821 ಗೆ ಕರೆ ಮಾಡಿ.