ಸುಳ್ಯ, ಆ. 22 (DaijiworldNews/TA): ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ, ಹಣ ಲೂಟಿಯಾಗಿದ್ದು ಈ ಬಗ್ಗೆ ಸಚಿವ ನಾಗೇಂದ್ರ ರಾಜೀನಾಮೆ ನೀಡುವಂತೆ ಒತ್ತಾಯಿಸಿ ಸುಳ್ಯ ಬಿಜೆಪಿ ವತಿಯಿಂದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಯಿತು.


ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಮಾತನಾಡಿ” ಬಡವರ ಹಿತದಿಂದ ರಚನೆಗೊಂಡ ವಾಲ್ಮೀಕಿ ನಿಗಮದ ಹಣ ಲೂಟಿ ಬಡ ಪಲಾನುಭವಿಗಳಿಗೆ ಅನ್ಯಾಯ ಮಾಡಿದ್ದು ಈ ವಿಚಾರದಲ್ಲಿ ನೇರವಾಗಿ ಸಚಿವ ನಾಗೇಂದ್ರ ಭಾಗಿಯಾಗಿದ್ದು ತಕ್ಷಣ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುವಂತೆ ಒತ್ತಾಯಿಸಿದರು.
ಪ್ರತಿಭಟನಾ ಸಭೆಯಲ್ಲಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರದೀಪ್ ರೈ, ವಿನಯ್ ಕಂದಡ್ಕ, ಪ್ರಮುಖರಾದ ಆಶಾ ತಿಮ್ಮಪ್ಪ, ಹರೀಶ್ ಕಂಜಿಪಿಲಿ, ಕುಸುಮಧಾರ ಎ.ಟಿ, ಶಿವಾನಂದ ಕುಕ್ಕುಂಬಳ,ಸುಭೋದ್ ಶೆಟ್ಟಿ ಮೇನಾಳ,ಅವಿನಾಶ್ ಕುರುಂಜಿ,ಅಶೋಕ್ ಅಡ್ಕಾರು, ಮತ್ತಿತರರು ಉಪಸ್ಥಿತರಿದ್ದರು.