ಮಂಗಳೂರು, ಆ. 22 (DaijiworldNews/AK): ನಗರದ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲವು ಪ್ರತ್ಯೇಕ ಪ್ರಕರಣ ಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಕುದ್ರೋಳಿಯ ಕರ್ಬಲ್ ರಸ್ತೆಯ ನಿವಾಸಿ ನೌಫಲ್ ಎಂದು ಗುರುತಿಸಲಾಗಿದೆ.
ನೌಫಲ್ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಹಲವು ಪ್ರಕರಣ ದಾಖಲಾಗಿದೆ. ಈತ ಕಳೆದ 10 ವರ್ಷಗಳಿಂದ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ. ಈತ ಕುದ್ರೋಳಿ ಜಂಕ್ಷನ್ ಬಳಿಯಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಬಂಧಿಸಿ ನ್ಯಾಯಲಕ್ಕೆ ಹಾಜಪಡಿಸಲಾಗಿದೆ.