ಉಡುಪಿ, ಆ. 25 (DaijiworldNews/AK): 9 ನೇ ತರಗತಿಯ ಬಾಲಕನೊಬ್ಬ ದೇವಸ್ಥಾನದ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದ ಘಟನೆ ಉಡುಪಿ ನಗರದಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ.

ಉಡುಪಿ ನಗರದ ಶ್ರೀ ಲಕ್ಷ್ಮಿ ವೆಂಕಟರಮಣ ದೇವಸ್ಥಾನದ ಕೊಳದಲ್ಲಿ ಈ ಘಟನೆ ಸಂಭವಿಸಿದೆ. ಸ್ಥಳೀಯ ನಿವಾಸಿಗಳ ಮನವಿಗೆ ಸ್ಪಂದಿಸಿದ ಈಜು ತಜ್ಞ ಈಶ್ವರ್ ಮಲ್ಪೆ, ಸುಮಾರು ತಾಸಿನ ಕಾರ್ಯಾಚರಣೆ ಬಳಿಕ ಬಾಲಕನ ಶವವನ್ನು ಮೇಲಕ್ಕೆತ್ತಲಾಯಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.