ಕಾಸರಗೋಡು, ಆ. 30 (DaijiworldNews/TA): ತೈಕಡಪ್ಪುರಂ ಬೀಚ್ ನಲ್ಲಿ ಸಮುದ್ರದಲ್ಲಿ ಸ್ನಾನ ಮಾಡಲು ಇಳಿದ ಯುವಕನೊಬ್ಬ ನಾಪತ್ತೆಯಾಗಿದ್ದಾನೆ. ಹನೀಫ್ ಅವರ ಪುತ್ರ ಅಜ್ಮಲ್ (22) ನಾಪತ್ತೆಯಾದ ಯುವಕ.

ಶನಿವಾರ ಸಂಜೆ 6 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಕರಾವಳಿ ಪೊಲೀಸ್ ಮತ್ತು ಸ್ಥಳೀಯರು ಜಂಟಿಯಾಗಿ ಹುಡುಕಾಟ ನಡೆಸುತ್ತಿದ್ದಾರೆ.