ಮಂಗಳೂರು,ಸೆ. 02 (DaijiworldNews/AK): ಕಂಕನಾಡಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ಆರೋಪಿ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ವ್ಯಕ್ತಿಯನ್ನು ಉರ್ವಾ ಅಶೋಕನಗರದ ಶೇಡಿಗುರಿಯ ನಿವಾಸಿ ಕಿರಣ್ ಕೊಯೆಲ್ಹೋ (41) ಎಂದು ಗುರುತಿಸಲಾಗಿದೆ.
ಕಿರಣ್ ನ್ಯಾಯಾಲಯದಿಂದ ಜಾಮೀನು ಪಡೆದಿದ್ದ, ಆದರೆ ಕಳೆದ ಎರಡು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗಲು ವಿಫಲರಾಗಿದ್ದ ಮತ್ತು ಬಂಧನದಿಂದ ತಪ್ಪಿಸಿಕೊಂಡಿದ್ದ. ಇದರ ನಂತರ, 3 ನೇ ಜೆಎಂಎಫ್ಸಿ ನ್ಯಾಯಾಲಯವು ಅವರ ಬಂಧನಕ್ಕೆ ವಾರಂಟ್ ಹೊರಡಿಸಿತ್ತು.
ಆರೋಪಿಯು ತನ್ನ ವಿಳಾಸವನ್ನು ಬದಲಾಯಿಸಿ ತಲೆಮರೆಸಿಕೊಂಡಿದ್ದ. ನಂತರ ಪೊಲೀಸರಿಗೆ ಆತ ವಿದೇಶಕ್ಕೆ ಪ್ರಯಾಣ ಬೆಳೆಸಿ ಅಲ್ಲಿ ತಲೆಮರೆಸಿಕೊಂಡಿರುವ ಮಾಹಿತಿ ಸಿಕ್ಕಿತು. ಈ ಮಾಹಿತಿಯ ಆಧಾರದ ಮೇಲೆ, ಆತನ ಪಾಸ್ಪೋರ್ಟ್ ವಿವರಗಳನ್ನು ಬಳಸಿಕೊಂಡು ಲುಕ್-ಔಟ್ ಸುತ್ತೋಲೆ (LOC) ಹೊರಡಿಸಲಾಯಿತು. ಆಗಸ್ಟ್ 31 ರಂದು ಕಿರಣ್ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ವೇಳೆ ಪೊಲೀಸರು ಅವರನನ್ನು ಬಂಧಿಸಿದ್ದಾರೆ.