ಮೂಡುಬಿದಿರೆ, ಸೆ. 03 (DaijiworldNews/AK): ಲಕ್ಷಾಂತರ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉತ್ತರ ಉಪವಿಭಾಗದ ಅಪರಾಧ ಪತ್ತೆ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾರುಪಡಿಸಿದೆ.

ಬಂಧಿತ ಆರೋಪಿಯನ್ನು ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ಬೈತಡ್ಕ ನಿವಾಸಿ ಶ್ರೀನಿವಾಸ ಬಿ.ಆರ್.(48) ಎಂದು ಗುರುತಿಸಲಾಗಿದೆ.
2009 ರಲ್ಲಿ ವಾಹನ ಖರೀದಿಗೆಂದು ಶ್ರೀರಾಮ್ ಫೈನಾನ್ಸ್ ಸಂಸ್ಥೆಯಿಂದ 10ಲಕ್ಷ ಸಾಲ ಪಡೆದು ಟೆಲ್ಕಾನ್ ಇಎಕ್ಸ್ 70 ವಾಹನ ಖರೀದಿ ಮಾಡಿದ್ದ. ನಂತರ ಸಾಲದ ಕಂತುಗಳನ್ನು ಪಾವತಿಸದೆ ವಾಹನ ಪರಿಶೀಲನೆಗೆ ಹಾಜರುಪಡಿಸದೇ ಸಂಸ್ಥೆಗೆ ವಂಚನೆ ಮಾಡಿದ ಆರೋಪದಡಿಯಲ್ಲಿ ಮೂಡುಬಿದಿರೆ ಠಾಣೆಯಲ್ಲಿ 2012 ರಲ್ಲಿ ಪ್ರಕರಣ ದಾಖಲಾಗಿತ್ತು.
ಸೆ.2 ರಂದು ಜಾಲ್ಸೂರು ಗ್ರಾಮದ ಬೈತಡ್ಕ ಜಂಕ್ಷನ್ನಲ್ಲಿ ಶ್ರೀನಿವಾಸನನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈತನ ವಿರುದ್ಧ ಚೆಕ್ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದ ಮತ್ತೊಂದು ವಾರಂಟ್ ಕೂಡ ಬಾಕಿ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.