ಮಂಗಳೂರು , ಸೆ. 06 (DaijiworldNews/TA): ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಮೊಸರು ಕುಡಿಕೆ ಸಂಭ್ರಮ ಮನೆಮಾಡಿದೆ. ನಗರದ ವಿವಿಧೆಡೆ ಆಯೋಜಿಸಲಾಗಿದ್ದ ಮೊಸರು ಕುಡಿಕೆ ಕಾರ್ಯಕ್ರಮಗಳಲ್ಲಿ ಯುವಕರು, ಮಕ್ಕಳು ಹಾಗೂ ಸಾರ್ವಜನಿಕರು ಉತ್ಸಾಹದಿಂದ ಪಾಲ್ಗೊಂಡರು.

ಶ್ರೀಕೃಷ್ಣನ ಬಾಲಲೀಲೆಯನ್ನು ನೆನಪಿಸುವ ಮೊಸರು ಕುಡಿಕೆ ಕಾರ್ಯಕ್ರಮದಲ್ಲಿ ಯುವಕರ ತಂಡಗಳು ಮಾನವ ಪಿರಮಿಡ್ ನಿರ್ಮಿಸಿ ಎತ್ತರದಲ್ಲಿ ಕಟ್ಟಲಾಗಿದ್ದ ಮೊಸರು ಕುಡಿಕೆಯನ್ನು ಒಡೆಯುವ ಸಾಹಸ ಪ್ರದರ್ಶಿಸಿದವು. ಕಾರ್ಯಕ್ರಮ ವೀಕ್ಷಿಸಲು ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಸೇರಿದ್ದರು. ಯುವಕರ ಸಾಹಸಕ್ಕೆ ಪ್ರೇಕ್ಷಕರು ಚಪ್ಪಾಳೆ ಹಾಗೂ ಹರ್ಷೋದ್ಗಾರದ ಮೂಲಕ ಪ್ರೋತ್ಸಾಹ ನೀಡಿದರು. ವಿವಿಧ ವೇಷಭೂಷಣಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಮೆರವಣಿಗೆಗಳು ಸಂಭ್ರಮಕ್ಕೆ ಮತ್ತಷ್ಟು ಮೆರುಗು ನೀಡಿದವು.