ಮಂಗಳೂರು, ಸೆ. 08 (DaijiworldNews/AA): 9 ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್ಪಿಸಿ ಆರೋಪಿಯನ್ನು ಮಂಗಳೂರು ಉತ್ತರ ಠಾಣಾ ಪೊಲೀಸರು ಬಂಧಿಸಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

ಉಳ್ಳಾಲದ ಮುಕ್ಕಚೇರಿಯ ಕಿಲೇರಿಯಾ ನಗರ ನಿವಾಸಿ ಅಶ್ಪಾಕ್(34) ಬಂಧಿತ ಆರೋಪಿ.
ಆರೋಪಿಯ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 197/2017 ಕಲಂ: 143, 147, 341, 504, 323, 506, 307, ಜೊತೆಗೆ 149 ಐಪಿಸಿಯಂತೆ ಪ್ರಕರಣ ದಾಖಲಾಗಿದ್ದು, ಸದ್ರಿ ಪ್ರಕರಣವು ಮಾನ್ಯ 2ನೇ ಜೆ.ಎಂ.ಎಫ್.ಸಿ ನ್ಯಾಯಾಲಯದ ಸಿ ಸಿ ನಂ. 5442/2018 ರಂತೆ ವಿಚಾರಣೆಯಲ್ಲಿರುತ್ತದೆ, ಆರೋಪಿಯು ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದು, ಮಾನ್ಯ ನ್ಯಾಯಾಲಯವು ಆರೋಪಿತನಿಗೆ ಎಲ್ ಪಿ ಸಿ ವಾರೆಂಟ್ ಹೊರಡಿಸಿರುತ್ತದೆ.
ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸೆ.೮ ರಂದು ಮಂಗಳೂರು ಉತ್ತರ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿಗಳು ಬಂಧಿಸಿದ್ದಾರೆ. ಬಂಧಿತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ.