ಬಂಟ್ವಾಳ, ಸೆ.29 (DaijiworldNews/AK): ನ್ಯಾಯಾಲಯದ ಪ್ರಕ್ರಿಯೆಯ ಕುರಿತು ಸುಳ್ಳು ಮಾಹಿತಿ ನೀಡಿದ ಆರೋಪ ವಕೀಲ ಪ್ರಸಾದ್ ವಿರುದ್ದ ದೂರು ದಾಖಲಾಗಿದೆ.

ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ನಿವಾಸಿ ಹನೀಫ್ (43)ನೀಡಿದ ದೂರಿನನ್ವಯ ಈ ಪ್ರಕರಣ ದಾಖಲಾಗಿದೆ.
ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ನಿವಾಸಿಗಳು ನೀಡಿದ ದೂರಿನನ್ವಯ ಈ ಪ್ರಕರಣ ದಾಖಲಾಗಿದೆ. ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಬಿ ಸಿ ರೋಡ್ ಎಂಬಲ್ಲಿ, ಧಾರ್ಮಿಕ ಸಂಘಟನೆಯೊಂದರ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ನಡೆಸಿದ ವಕೀಲರಾದ ಪ್ರಸಾದ್ ಅವರು ನ್ಯಾಯಾಲಯದ ಪ್ರಕ್ರಿಯೆಗಳು ಮತ್ತು ಕಾನೂನು ನಡಾವಳಿಗಳಿಗೆ ಸಂಬಂಧಿಸಿದಂತೆ ತಪ್ಪು ಹಾಗೂ ಸುಳ್ಳು ಮಾಹಿತಿಗಳನ್ನು ನೀಡಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಂಟ್ವಾಳ ನಗರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.