ಮಂಗಳೂರು, ಸೆ.30 (DaijiworldNews/AA): ಕೋರ್ಟ್ ಸಮನ್ಸ್ ಹಾಗೂ ಹಲವು ಬಾರಿ ವಾರಂಟ್ ಜಾರಿಯಾಗಿದ್ದರೂ ಕಳೆದ 12 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮುಲ್ಕಿ ಸಮೀಪದ ಕೆ.ಎಸ್. ರಾವ್ ನಗರದ ಹನುಮಾನ್ ದೇವಸ್ಥಾನದ ಬಳಿಯ ನಿವಾಸಿ ಸಂತೋಷ್ (33) ಎಂದು ಗುರುತಿಸಲಾಗಿದೆ.
ಆರೋಪಿಯನ್ನು ಲಿಂಗಪ್ಪಯ್ಯಕಾಡು ಎಂಬಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಮುಲ್ಕಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡುಬಿದಿರೆಯ ಹಿರಿಯ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ಸಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು. ಆದರೆ ಆರೋಪಿಯು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.