ಸುಳ್ಯ, ಜೂ 15 (DaijiworldNews/SM): ಸ್ಕೂಟಿ ಮತ್ತು ಪಿಕಪ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಸುಳ್ಯ ತಾಲೂಕಿನ ಕಲ್ಲುಗುಂಡಿಯ ಮಧ್ಯಪೇಟೆಯಲ್ಲಿ ಸಂಭವಿಸಿದೆ. ಅಪಘಾತದ ರಭಸಕ್ಕೆ ಸ್ಕೂಟಿ ನಜ್ಜುಗುಜ್ಜಾಗಿದೆ.

ಅವಘಡದಲ್ಲಿ ಸ್ಕೂಟಿ ಸವಾರ ಪವಾಡ ಸದೃಶವಾಗಿ ಪಾರಾಗಿದ್ದಾನೆ. ಸ್ಕೂಟಿ ಪಿಕಪ್ ಗೆ ಡಿಕ್ಕಿ ಹೊಡೆದಿದ್ದು, ಪಿಕಪ್ ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ಸಂಭವ್ಯ ಅಪಘಡ ತಪ್ಪಿದಂತಾಗಿದೆ. ಘಟನೆಯಲ್ಲಿ ಸ್ಕೂಟಿ ಸವಾರನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ಹೇಳಿಕೊಂಡಿದ್ದಾರೆ. ಅಪಘಾತದ ದೃಶ್ಯ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದ್ದು ವ್ಯಾಪಕ ವೈರಲ್ ಆಗುತ್ತಿದೆ.
ಸ್ಥಳಕ್ಕೆ ಕಲ್ಲುಗುಂಡಿ ಪೊಲೀಸರು ಆಗಮಿಸಿದ್ದು,ಪರಿಶೀಲನೆ ನಡೆಸುತ್ತಿದ್ದಾರೆ.