ಮಂಗಳೂರು, ಅ 18(DaijiworldNews/PC): ಕರಾವಳಿ ಭಾಗದಲ್ಲಿ ಅಭಿವೃದ್ಧಿ ವಿಚಾರದಲ್ಲಿ ಬಿಜೆಪಿಗೆ ಸರ್ಕಾರಕ್ಕೆ ಕಾಳಜಿ ಇಲ್ಲವಾಗಿದೆ ಎಂದು ರಾಜ್ಯಸಭೆ ಸದಸ್ಯ ಡಾ. ನಾಸಿರ್ ಹುಸೇನ್ ಆರೋಪಿಸಿದ್ದಾರೆ.

ಈ ಕುರಿತು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ದ್ವೇಷ, ಹಿಂಸೆ ಮುಂದುವರೆದರೆ ಅಭಿವೃದ್ಧಿ ಅಸಾಧ್ಯ ಎಂದರು.
ಇನ್ನು ಈ ಬಾರಿ ಪಂಚ ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಮೆಜಾರಿಟಿ ಬರಲಿದ್ದು ಬಹುತೇಕ ಸರ್ವೇ ವರದಿಗಳಲ್ಲಿ ಕಾಂಗ್ರೆಸ್ ಪರ ಜನರ ಒಲವು ಕಂಡುಬಂದಿದೆ ಎಂದರು. ಕರಾವಳಿ ಭಾಗದಲ್ಲಿ ಅಭಿವೃದ್ಧಿ ವಿಚಾರದಲ್ಲಿ ಬಿಜೆಪಿಗೆ ಸರ್ಕಾರಕ್ಕೆ ಕಾಳಜಿ ಇಲ್ಲವಾಗಿದೆ. ಕಾಂಗ್ರೆಸ್ ಸರ್ಕಾರ ಮುಂಚೂಣಿಗೆ ಬಂದಲ್ಲಿ ಮಾತ್ರ ಅಭಿವೃದ್ಧಿ, ಶಾಂತಿ ಸಾಧ್ಯವಾಗುತ್ತದೆ ಎಂದಿದ್ದಾರೆ.
ಪತ್ರಿಕಾ ಗೋಷ್ಟಿಯಲ್ಲಿ ಕಾಂಗ್ರೆಸ್ ಮುಖಂಡರಾದ ಜೆ ಆರ್ ಲೋಬೋ, ಐವನ್ ಡಿ ಸೋಜ ಮತ್ತಿತರರು ಉಪಸ್ಥಿತರಿದ್ದರು.