ಹುಬ್ಬಳ್ಳಿ, ಏ.14 (DaijiworldNews/AA): ಐದು ವರ್ಷದ ಮಗುವಿನ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಹಾಗೂ ಹತ್ಯೆ ಪ್ರಕರಣ ಇಡೀ ಸಮಾಜ ತಲೆಗಿಸುವ ವಿಚಾರವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಸಂತೋಷ ಲಾಡ್ ತಿಳಿಸಿದ್ದಾರೆ.

ಹುಬ್ಬಳ್ಳಿಯ ಕಿಮ್ಸ್ ಶವಾಗಾರಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ದಿನಗಳಲ್ಲಿ ಹುಬ್ಬಳ್ಳಿಯಲ್ಲಿ ಮಹಿಳೆಯರ ಸುರಕ್ಷಿತೆಗೆ ಕ್ರಮ ಕೈಗೊಳ್ಳಲಾಗುವುದು. ಹುಬ್ಬಳ್ಳಿ ಧಾರವಾಡದ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ ಸಿಸಿ ಕ್ಯಾಮೆರಾಗಳ ಅಳವಡಿಕೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಸರ್ಕಾರ ಬಾಲಕಿ ಕುಟುಂಬಕ್ಕೆ ಈಗಾಗಲೇ ಪರಿಹಾರ ಘೋಷಣೆ ಮಾಡಿದೆ. ವಸತಿ ಸಚಿವ ಜಮೀರ್ ಅಹ್ಮದ್ ಕೂಡ ವಸತಿ ಇಲಾಖೆಯಿಂದ ಮೃತ ಬಾಲಕಿ ಕುಟುಂಬಸ್ಥರಿಗೆ ಮನೆ ನೀಡುವ ಭರವಸೆ ನೀಡಿದ್ದಾರೆ. ಮುಖ್ಯಮಂತ್ರಿಗಳ ಜೊತೆ ಮಾತನಾಡಿ ಇನ್ನೂ ಹೆಚ್ಚಿನ ಪರಿಹಾರಕ್ಕಾಗಿ ಮನವಿ ಮಾಡಲಾಗವುದು ಸ್ಪಷ್ಟಪಡಿಸಿದ್ದಾರೆ.