ಬೆಂಗಳೂರು, ಏ.14 (DaijiworldNews/AK):ರಾಜ್ಯದ್ಯಾಂತ ನಾಳೆಯಿಂದ ಸಿಇಟಿ ಪರೀಕ್ಷೆ ನಡೆಯಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ ಡ್ರೆಸ್ಕೋಡ್ ಬಿಡುಗಡೆ ಮಾಡಿದೆ.

ವಿದ್ಯಾರ್ಥಿಗಳು ಕಡ್ಡಾಯವಾಗಿ ಡ್ರೆಸ್ಕೋಡ್ ಪಾಲನೆ ಮಾಡುವಂತೆ ಕೆಇಎ ಸೂಚನೆ ನೀಡಿದೆ. ಪರೀಕ್ಷಾ ಅಕ್ರಮ ತಡೆಯಲು ವೆಬ್ ಕ್ಯಾಸ್ಟಿಂಗ್ ವ್ಯವಸ್ಥೆಯನ್ನು ಮಾಡಿದೆ
ಸಿಇಟಿ ಪರೀಕ್ಷೆಯ ನಿಯಮ:
- ವೆಬ್ ಕಾಸ್ಟಿಂಗ್ ಮೂಲಕ ಎಲ್ಲ 775 ಪರೀಕ್ಷಾ ಕೇಂದ್ರಗಳ ಮೇಲೆ ನಿಗಾ ಇಡುವ ವ್ಯವಸ್ಥೆ.
-ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮೇಲುಸ್ತುವಾರಿ.
- ಪರೀಕ್ಷೆಗೆ ಒಂದೂವರೆ ಗಂಟೆ ಮುಂಚೆ ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳು ಹಾಜರಾಗಬೇಕು.
-ಪೊಲೀಸ್/ ಗೃಹ ರಕ್ಷಕ ದಳದ ಸಿಬ್ಬಂದಿ ಅಭ್ಯರ್ಥಿಗಳ ತಪಾಸಣೆ ಬಳಿಕವೇ ಪರೀಕ್ಷಾ ಕೇಂದ್ರಕ್ಕೆ ತೆರಳಲು ಅವಕಾಶ.
- ಕನಿಷ್ಠ ಒಂದೂವರೆ ಗಂಟೆ ಮುಂಚೆಯೇ ಪರೀಕ್ಷಾ ಕೇಂದ್ರಕ್ಕೆ ಅಭ್ಯರ್ಥಿಗಳು ಬಂದು ತಪಾಸಣೆಗೆ ಒಳಗಾಗಬೇಕು.
-ಅಭ್ಯರ್ಥಿಯ ಮುಖ ಚಹರೆ ಮತ್ತು ಕ್ಯೂಆರ್ ಕೋಡ್ ವ್ಯವಸ್ಥೆ ಮೂಲಕ ಅಭ್ಯರ್ಥಿಯ ನೈಜತೆ ಪರಿಶೀಲನೆ ಮಾಡಲಾಗುತ್ತದೆ.
-ಯಾರದ್ದೋ ಪರೀಕ್ಷೆಯನ್ನು ಇನ್ಯಾರೋ ಬರೆಯುವುದನ್ನು ತಡೆಯುವ ಸಲುವಾಗಿ ವ್ಯವಸ್ಥೆ ಜಾರಿ.
ಡ್ರೆಸ್ ಕೋಡ್:
- ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕ ವಸ್ತ್ರ ಸಂಹಿತೆ.
-ಪುರುಷ/ಮಹಿಳಾ ಅಭ್ಯರ್ಥಿಗಳು ಅರ್ಧ ತೋಳಿನ ಬಟ್ಟೆ ಧರಿಸಬೇಕು.
- ಸಾಧ್ಯವಾದಷ್ಟು ಕಾಲರ್ ಇಲ್ಲದಿರುವುದನ್ನು ಹಾಕಿಕೊಂಡು ಬಂದರೆ ಉತ್ತಮ.
-ಪುರುಷರು, ಜೇಬು ಇಲ್ಲದ/ಕಡಿಮೆ ಜೇಬುಗಳಿರುವ ಸರಳ ಪ್ಯಾಂಟ್ ಧರಿಸಬೇಕು.
-ಕುರ್ತಾ ಪೈಜಾಮ/ಜೀನ್ಸ್ ಪ್ಯಾಂಟ್ಗೆ ಅವಕಾಶ ಇಲ್ಲ.
-ಶೂ ಕೂಡ ನಿಷೇಧ.
* ಮೊಬೈಲ್, ಪೆನ್ಡ್ರೈವ್, ಇಯರ್ ಫೋನ್, ಮೈಕ್ರೋ ಫೋನ್ ಇತ್ಯಾದಿ ಎಲೆಕ್ಟ್ರಾನಿಕ್ ವಸ್ತುಗಳನ್ನು ಸಂಪೂರ್ಣ ನಿಷೇಧ.