ಬೆಂಗಳೂರು, ಏ.21 (DaijiworldNews/AK): ಪತ್ನಿಯಿಂದಲೇ ಕೊಲೆಯಾದ ನಿವೃತ್ತ ಡಿಜಿಪಿ ಓಂ ಪ್ರಕಾಶ್ (68) ಅವರ ಅಂತ್ಯಕ್ರಿಯೆ ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ಸರ್ಕಾರಿ ಗೌರವಗಳೊಂದಿಗೆ ನೆರವೇರಿದೆ.

ಮೂರು ಸುತ್ತು ಕುಶಲತೋಪು ಸಿಡಿಸುವ ಮೂಲಕ ಸರ್ಕಾರಿ ಗೌರವ ಸೂಚಿಸಲಾಗಿದೆ. ಅಂತ್ಯಕ್ರಿಯೆಗೂ ಮುನ್ನ ಹೆಚ್ಎಸ್ಆರ್ ಲೇಔಟ್ನ ಎಂಸಿಹೆಚ್ಎಸ್ ಕ್ಲಬ್ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.
ಓಂ ಪ್ರಕಾಶ್ ಜೊತೆಗೆ ಕೆಲಸ ಮಾಡಿದ ಪೊಲೀಸ್ ಅಧಿಕಾರಿಗಳು ಅಂತಿಮ ದರ್ಶನ ಪಡೆದರು.
ಹೆಚ್ಎಸ್ಆರ್ ಲೇಔಟ್ನ ಮನೆಯಲ್ಲಿ ಓಂ ಪ್ರಕಾಶ್ ಅವರನ್ನು ಭಾನುವಾರ (ಏ.20) ಸಂಜೆ 4 ಗಂಟೆ ಸುಮಾರಿಗೆ ಪತ್ನಿ ಪಲ್ಲವಿಯವರೇ ಕಣ್ಣಿಗೆ ಖಾರದ ಪುಡಿ ಎರಚಿ, ಚಾಕುವಿನಿಂದ 8-10 ಬಾರಿ ಎದೆ, ಹೊಟ್ಟೆ ಭಾಗಕ್ಕೆ ಇರಿದು ಕೊಲೆಗೈದಿದ್ದರು.ಈ ವೇಳೆ, ಸುಮಾರು 10-15 ನಿಮಿಷ ರಕ್ತದ ಮಡುವಿನಲ್ಲಿ ಓಂ ಪ್ರಕಾಶ್ ಒದ್ದಾಡಿ ಪ್ರಾಣ ಬಿಟ್ಟಿದ್ದರು. ಈ ವೇಳೆ ಗಂಡನ ನರಳಾಟ ನೋಡುತ್ತಾ ಪತ್ನಿ ನಿಂತಿದ್ದರು. ಈ ಸಂಬಂಧ ಆರೋಪಿಯನ್ನು ಬಂಧಿಸಿದ್ದು, ವಿಚಾರಣೆ ನಡೆಯುತ್ತಿದೆ.