ಶ್ರೀನಗರ, ಏ.22 (DaijiworldNews/AA): ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಶಿವಮೊಗ್ಗದ ಪ್ರವಾಸಿಗರೊಬ್ಬರು ಮೃತಪಟ್ಟಿದ್ದಾರೆ. ಜೊತೆಗೆ ದಾಳಿಯಲ್ಲಿ ಇತರ 12 ಜನ ಗಾಯಗೊಂಡಿದ್ದಾರೆ.

ಪ್ರವಾಸಕ್ಕೆ ತೆರಳಿದ್ದ ಶಿವಮೊಗ್ಗದ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ರಾವ್ (47) ಸಾವನ್ನಪ್ಪಿದ್ದಾರೆ. ಶಿವಮೊಗ್ಗದ ವಿಜಯನಗರ ನಿವಾಸಿಯಾಗಿರುವ ಮಂಜುನಾಥ್ ಅವರು ಪತ್ನಿ ಪಲ್ಲವಿ ಹಾಗೂ ಪುತ್ರ ಅಭಿಜೇಯ ಜೊತೆ ಪ್ರವಾಸಕ್ಕೆ ತೆರಳಿದ್ದರು. ಇನ್ನು ಪತ್ನಿ ಮತ್ತು ಪುತ್ರ ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.
ಏ.19 ರಂದು ಶಿವಮೊಗ್ಗದಿಂದ ಕಾಶ್ಮೀರ ಪ್ರವಾಸಕ್ಕೆ ಮಂಜುನಾಥ್ ಕುಟುಂಬಸ್ಥರು ತೆರಳಿದ್ದರು. ಭಯೋತ್ಪಾದಕರ ದಾಳಿಯಲ್ಲಿ ಸ್ಥಳದಲ್ಲೇ ಮಂಜುನಾಥ್ ರಾವ್ ಸಾವನ್ನಪ್ಪಿದ್ದಾರೆ. ಮಂಜುನಾಥ್ ಪತ್ನಿ ಹಾಗೂ ಪುತ್ರರನ್ನ ಸ್ಥಳೀಯರು ರಕ್ಷಿಸಿದ್ದಾರೆ.