ಬೆಂಗಳೂರು, ಏ.25 (DaijiworldNews/AA): ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಯ ಮಾಜಿ ಅಧ್ಯಕ್ಷ ಕೆ. ಕಸ್ತೂರಿರಂಗನ್ ಶುಕ್ರವಾರ ಬೆಂಗಳೂರಿನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.

ಇಸ್ರೋದ ಮಾಹಿತಿಯ ಪ್ರಕಾರ, ಕಸ್ತೂರಿರಂಗನ್ ಅವರು ಇಂದು ಬೆಳಿಗ್ಗೆ 10.43 ಕ್ಕೆ ನಿಧನರಾಗಿದ್ದಾರೆ. ಅವರ ಪಾರ್ಥಿವ ಶರೀರವನ್ನು ಏಪ್ರಿಲ್ 27 ರ ಭಾನುವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನದವರೆಗೆ ಬೆಂಗಳೂರಿನ ರಾಮನ್ ಸಂಶೋಧನಾ ಸಂಸ್ಥೆಯಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಇರಿಸಲಾಗುವುದು.
ಕಸ್ತೂರಿರಂಗನ್ ಅವರು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮತ್ತು ಬಾಹ್ಯಾಕಾಶ ಆಯೋಗದ ಅಧ್ಯಕ್ಷರಾಗಿ, ಸರ್ಕಾರದ ಕಾರ್ಯದರ್ಶಿಯಾಗಿ 9 ವರ್ಷಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದರು. ಅವರು 2003 ರವರೆಗೆ ಇಸ್ರೋದ ನೇತೃತ್ವ ವಹಿಸಿದ್ದರು. 2003ರ ಆಗಸ್ಟ್ 27ರಂದು ಅವರ ಅಧಿಕಾರಾವಧಿ ಮುಕ್ತಾಯಗೊಂಡಿತು. ಕೆ. ಕೃಷ್ಣಸ್ವಾಮಿ ಅವರು ಪದ್ಮವಿಭೂಷಣ, ಪದ್ಮಭೂಷಣ, ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದರು.