ಬೆಂಗಳೂರು, ಜೂ. 10 (DaijiworldNews/AK): ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದ 100 ಕೋಟಿ ರೂ. ಮೌಲ್ಯದ 92 ಆಸ್ತಿಗಳನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಿ ಮಾರುಕಟ್ಟೆ ಮೌಲ್ಯದ ಅಂದಾಜು 100 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಲಾಗಿದೆ ಎಂದು ಇಡಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಮುಟ್ಟುಗೋಲು ಹಾಕಿಕೊಂಡ ಆಸ್ತಿಗಳನ್ನು ವಸತಿ ಸಹಕಾರಿ ಸಂಘ ಮತ್ತು ಮುಡಾ ಅಧಿಕಾರಿಗಳು ಸೇರಿದಂತೆ ಪ್ರಭಾವಿ ವ್ಯಕ್ತಿಗಳ ಹೆಸರಿನಲ್ಲಿ ನೋಂದಾಯಿಸಲಾಗಿತ್ತು. ವಿವಿಧ ಕಾನೂನುಗಳು ಮತ್ತು ಸರ್ಕಾರಿ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಮುಡಾ ಸೈಟ್ಗಳ ಹಂಚಿಕೆ ಮಾಡಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ.