ಅಹಮದಾಬಾದ್, ಜೂ. 14 (DaijiworldNews/AA): ವಿಮಾನ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಏರ್ ಇಂಡಿಯಾ ವಿಮಾನಯಾನ ಸಂಸ್ಥೆ ತಲಾ 25 ಲಕ್ಷ ರೂ. ಮಧ್ಯಂತರ ಪರಿಹಾರ ಘೋಷಿಸಿದೆ.

ಈಗಾಗಲೇ ಟಾಟಾ ಸಮೂಹ ತಲಾ 1 ಕೋಟಿ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿತ್ತು. ಇದೀಗ ಹೆಚ್ಚುವರಿಯಾಗಿ ಏರ್ ಇಂಡಿಯಾ ಸಂಸ್ಥೆ ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಣೆ ಮಾಡಿದೆ.
ಈ ಕುರಿತು ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಏರ್ ಇಂಡಿಯಾ ಸಂಸ್ಥೆ, "ವಿಮಾನ ದುರಂತದಲ್ಲಿ ಪ್ರಾಣ ಕಳೆದುಕೊಂಡ ಪ್ರಯಾಣಿಕರ ಕುಟುಂಬಗಳೊಂದಿಗೆ ಏರ್ ಇಂಡಿಯಾ ಒಟ್ಟಾಗಿ ನಿಲ್ಲುತ್ತದೆ. ಊಹಿಸಲೂ ಸಾಧ್ಯವಾಗದ ಈ ಪರಿಸ್ಥಿತಿಯಲ್ಲಿ ಕುಟುಂಬಗಳಿಗೆ ಅಗತ್ಯವಿರುವ ಎಲ್ಲಾ ನೆರವನ್ನು ನಮ್ಮ ಸಂಸ್ಥೆ ಒದಗಿಸಲಿದೆ. ಹೀಗಾಗಿ ಸಂತ್ರಸ್ತ ಕುಟುಂಬಗಳು ತಕ್ಷಣದ ಆರ್ಥಿಕತೆಗಳನ್ನು ಪೂರೈಸಲು ತಲಾ 25 ಲಕ್ಷ ರೂ. ಆರ್ಥಿಕ ನೆರವು ನೀಡಲಿದೆ" ಎಂದು ತಿಳಿಸಿದೆ.