ಅಹಮದಾಬಾದ್, ಜೂ. 15 (DaijiworldNews/AA): ಏರ್ ಇಂಡಿಯಾ ವಿಮಾನ ದುರಂತ ಸಂಭವಿಸಿದ ಮೂರು ದಿನಗಳ ನಂತರ ಗುಜರಾತ್ನ ಮಾಜಿ ಸಿಎಂ ವಿಜಯ್ ರೂಪಾನಿ ಅವರ ಮೃತದೇಹದ ಗುರುತು ಪತ್ತೆಯಾಗಿದ್ದು, ಮೃತದೇಹ ಹಸ್ತಾಂತರಕ್ಕೆ ತಯಾರಿ ನಡೆದಿದೆ ಎಂದು ತಿಳಿದುಬಂದಿದೆ.

ಈ ಕುರಿತು ರಾಜ್ಯದ ಗೃಹ ಸಚಿವ ಹರ್ಷ್ ಸಾಂಘವಿ ಮಾಹಿತಿ ನೀಡಿದ್ದು, ಇಂದು ಬೆಳಗ್ಗೆ 11:10ಕ್ಕೆ ಬಂದ ಡಿಎನ್ಎ ವರದಿ ಬಂದಿದೆ. ಅಪಘಾತ ಸ್ಥಳದಲ್ಲಿ ಪತ್ತೆಯಾದ ಮೃತದೇಹದೊಂದಿಗೆ ರೂಪಾನಿ ಅವರ ಡಿಎನ್ಎ ಮ್ಯಾಚ್ ಆಗಿದೆ ಎಂದು ಹೇಳಿದ್ದಾರೆ.
ರೂಪಾನಿ ಅವರ ಸಹೋದರಿಯಿಂದ ಸ್ಯಾಂಪಲ್ ಪಡೆದು ಡಿಎನ್ಎ ಪರೀಕ್ಷೆ ಮಾಡಲಾಗಿತ್ತು. ಪರೀಕ್ಷೆ ವೇಳೆ ಡಿಎನ್ಎ ಮಾಚ್ ಆಗಿದ್ದು ಮೂರು ದಿನಗಳ ಬಳಿಕ ಮೃತದೇಹದ ಗುರುತು ಪತ್ತೆಯಾಗಿದೆ. ಸದ್ಯ ಈ ಬಗ್ಗೆ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದ್ದು, ಶೀಘ್ರದಲ್ಲೇ ಅವರು ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ. ಬಂದ ಬಳಿಕ ಮೃತದೇಹ ಹಸ್ತಾಂತರಿಸಲಾಗುತ್ತದೆ. ಇನ್ನು ರಾಜಕೋಟ್ನಲ್ಲಿ ವಿಜಯ್ ರೂಪಾನಿ ಅವರ ಅಂತ್ಯಕ್ರಿಯೆ ನಡೆಸಲು ಕುಟುಂಬಸ್ಥರು ಈಗಾಗಲೇ ತಯಾರಿ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.