ಪಾಟ್ನಾ, ಜೂ. 15 (DaijiworldNews/AA): ಬಿಹಾರ ರಾಜಧಾನಿ ಪಾಟ್ನಾದಲ್ಲಿ ಇತ್ತೀಚೆಗಷ್ಟೇ ಉದ್ಘಾಟನೆಯಾದ 422 ಕೋಟಿ ರೂ. ವೆಚ್ಚದ ಡಬಲ್ ಡೆಕ್ಕರ್ ಫ್ಲೈ ಓವರ್ನ ನಟ್ ಬೋಲ್ಟ್ಗಳನ್ನು ಮಕ್ಕಳು ಕದಿಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಬಿಹಾರದ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್ ಅನ್ನು ಮುಖ್ಯಮಂತ್ರಿ ನಿತೀಶ್ ಕುಮಾರ್ ಜೂನ್ 11 ರಂದು ಉದ್ಘಾಟಿಸಿದ್ದರು. ಉದ್ಘಾಟನೆಯಾದ ಎರಡನೇ ದಿನದಲ್ಲಿ 422 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಫ್ಲೈ ಓವರ್ನ ಬೋಲ್ಟ್ಗಳನ್ನು ಮಕ್ಕಳು ಕದಿಯಲು ಯತ್ನಿಸಿದ್ದಾರೆ.
ಹಗಲು ಹೊತ್ತಿನಲ್ಲೇ ಮಕ್ಕಳು ಬೋಲ್ಟ್ಗಳನ್ನು ಕದಿಯುತ್ತಿರುವುದನ್ನು ವ್ಯಕ್ತಿಯೊಬ್ಬರು ವಿಡಿಯೋ ಮಾಡಿದ್ದಾರೆ. ವಿಡಿಯೋ ಮಾಡಿ ಪ್ರಶ್ನಿಸುತ್ತಿದ್ದಂತೆ ಮಕ್ಕಳು ಸ್ಥಳದಿಂದ ಓಡಿ ಹೋಗಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈವಿಡಿಯೋ ಸಖತ್ ವೈರಲ್ ಆಗಿದೆ. ಸಾರ್ವಜನಿಕ ಸುರಕ್ಷತೆ ಮತ್ತು ಮೂಲಸೌಕರ್ಯ ಸುರಕ್ಷತೆಯ ಬಗ್ಗೆ ನೆಟ್ಟಿಗರು ಗಂಭೀರ ಆತಂಕ ವ್ಯಕ್ತಪಡಿಸಿದ್ದಾರೆ.