ನವದೆಹಲಿ, ಜು. 09 (DaijiworldNews/AK):ಸಂಪುಟ ವಿಸ್ತರಣೆ ವಿಚಾರವಾಗಿ ಚರ್ಚಿಸಲು ನಾನು ಹಾಗೂ ಸಿಎಂ ಸಿದ್ದರಾಮಯ್ಯ ದೆಹಲಿಗೆ ಬಂದಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.

ಕೇಂದ್ರದ ವಿವಿಧ ಸಚಿವರ ಜತೆ ಕರ್ನಾಟಕದ ಅಭಿವೃದ್ಧಿ ಯೋಜನೆಗಳ ವಿಚಾರವಾಗಿ ಮಾತುಕತೆ ನಡೆಸಿದ ನಂತರ ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಅವರು ಮಾತನಾಡಿದರು. ಅಭಿವೃದ್ಧಿ ಯೋಜನೆಗಳ ಸಲುವಾಗಿ ಚರ್ಚಿಸಲು ನಾವು ಬಂದಿದ್ದೇವೆ. ರಾಹುಲ್ ಗಾಂಧಿ ಅವರ ಭೇಟಿಗೂ ಸಮಯ ಕೋರಿದ್ದೇನೆ. ನಾಳೆ ಭೇಟಿ ಮಾಡುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.
ಸಂಪುಟ ಪುನರ್ ರಚನೆ ಕುರಿತು ಚರ್ಚಿಸಲು ನಾವು ದೆಹಲಿಗೆ ಬಂದಿಲ್ಲ. ಮೈಸೂರು ದಸರಾದಲ್ಲಿ ಏರ್ ಶೋ ಆಯೋಜನೆ ಬಗ್ಗೆ ಮನವಿ ಮಾಡಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಲಾಗುತ್ತಿದೆ ಎಂದು ಡಿಸಿಎಂ ತಿಳಿಸಿದರು.