ಚಿಕ್ಕಮಗಳೂರು, ಆ. 01 (DaijiworldNews/AA): ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ನಿಯಮಿತದ ನಿದೇರ್ಶಕರಾಗಿ ಹರ್ಷ ಮೇಲ್ವಿನ್ ಲಸ್ರಾದೋ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದ್ದು. ಈ ಸಂಬಂಧ ಅಧಿಕೃತ ಆದೇಶ ಹೊರಡಿಸಲಾಗಿದೆ.

ಅಲ್ಪಸಂಖ್ಯಾತರ ಕಲ್ಯಾಣ , ಹಜ್ ಹಾಗೂ ವಕ್ಪ್ ಇಲಾಖೆಯ ಉಪ ಕಾರ್ಯದರ್ಶಿ ಎಂ. ಜ್ಯೋತಿ ಪ್ರಕಾಶ್ ಅವರು ಈ ನೇಮಕಾತಿ ಆದೇಶ ಹೊರಡಿಸಿದ್ದಾರೆ. ಈ ನೇಮಕ ಮುಂದಿನ ಆದೇಶದವರೆಗೆ ಜಾರಿಯಲ್ಲಿರಲಿದೆ ಎಂದು ಆ ಮಹತ್ವದ ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಹರ್ಷ ಮೇಲ್ವಿನ್ ಲಸ್ತಾದೋ ಅವರು ಹಿರಿಯ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾಗಿದ್ದು, ಹಲವು ವರ್ಷಗಳಿಂದ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ. ಕೆಪಿಸಿಸಿಯ ವಿವಿಧ ಹುದ್ದೆಗಳಲ್ಲಿ ಅವರು ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಅವರನ್ನು ನಿಗಮದ ನಿದೇರ್ಶಕ ಸ್ಥಾನಕ್ಕೆ ನೇಮಕ ಮಾಡಲಾಗಿದೆ.