ನವದೆಹಲಿ, ಆ. 24 (DaijiworldNews/AA): "ಲೋಕಸಭೆಯಲ್ಲಿ ರಾಹುಲ್ ಗಾಂಧಿ ಮಾತನಾಡುವಾಗಲೆಲ್ಲಾ ಅವರ ಪಕ್ಷದ ಸಂಸದರು ಮುಜುಗರಕ್ಕೊಳಗಾಗುತ್ತಾರೆ. ರಾಹುಲ್ ಗಾಂಧಿ ತಮ್ಮದೇ ಪಕ್ಷದ ನಾಯಕರ ಮಾತನ್ನು ಕೇಳುವುದಿಲ್ಲ" ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಆರೋಪಿಸಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, "ನಾನು ಸುಮ್ಮನೇ ಕಾಂಗ್ರೆಸ್ ಪಕ್ಷದ ನಾಯಕರನ್ನು ದೂಷಿಸುವುದಿಲ್ಲ ಯಾಕೆಂದರೆ ಅವರೆಲ್ಲರೂ ರಾಹುಲ್ ಗಾಂಧಿ ಹೇಳಿದಂತೆಯೇ ನಡೆದುಕೊಳ್ಳಬೇಕು. ರಾಹುಲ್ ಯಾರ ಮಾತನ್ನೂ ಕೇಳುವುದಿಲ್ಲ. ರಾಹುಲ್ ಗಾಂಧಿ ಏನಾದರೂ ಹೇಳಿದಾಗಲೆಲ್ಲಾ ಅವರ ಎಲ್ಲಾ ಸಂಸದರು ಮುಜುಗರಕ್ಕೊಳಗಾಗುತ್ತಾರೆ. ಪ್ರಜಾಪ್ರಭುತ್ವದಲ್ಲಿ, ವಿರೋಧ ಪಕ್ಷವು ಬಲವಾಗಿರಬೇಕು.ಅವರು ವಿರೋಧ ಪಕ್ಷದ ಮೂಲಭೂತ ಕರ್ತವ್ಯಗಳನ್ನು ನಿರ್ವಹಿಸಲು ಸಾಧ್ಯವಾಗುವುದಿಲ್ಲ" ಎಂದು ಹೇಳಿದರು.
"ಭಾರತ ಮತ್ತು ಫ್ರಾನ್ಸ್ ನಡುವಿನ ರಫೇಲ್ ಒಪ್ಪಂದದ ಬಗ್ಗೆ ಅಸಂಬದ್ಧವಾಗಿ ಮಾತನಾಡಿದಕ್ಕಾಗಿ ಮಾಜಿ ಕಾಂಗ್ರೆಸ್ ಅಧ್ಯಕ್ಷರನ್ನು ಸುಪ್ರೀಂ ಕೋರ್ಟ್ ಗದರಿಸಿತ್ತು ಎಂದು ಹೇಳಿದರು. ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ಸೋತಾಗಲೆಲ್ಲಾ ಸರ್ಕಾರ ಮತ್ತು ಸಂಸ್ಥೆಗಳ ಮೇಲೆ ದಾಳಿ ಮಾಡಲು ಪ್ರಾರಂಭಿಸುತ್ತದೆ" ಎಂದರು.
"ಗಾಂಧಿಯವರು ನ್ಯಾಯಾಂಗ ಮತ್ತು ಭಾರತೀಯ ಚುನಾವಣಾ ಆಯೋಗದ ಮೇಲೆ ದಾಳಿ ಮಾಡಿದ್ದಕ್ಕಾಗಿಯೂ ಅವರು ಟೀಕಿಸಿದರು. ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ದೇಶವನ್ನು ದುರ್ಬಲಗೊಳಿಸುತ್ತಿದ್ದಾರೆ. ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಅವರೊಂದಿಗೆ ಒಟ್ಟಾಗಿ ಕೆಲಸ ಮಾಡಿ ದೇಶವನ್ನು ದುರ್ಬಲಗೊಳಿಸುತ್ತಿವೆ. ಇದು ತುಂಬಾ ಕಳವಳಕಾರಿ. ಆದರೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಯಾರೂ ದೇಶವನ್ನು ಅಸ್ಥಿರಗೊಳಿಸಲು ಸಾಧ್ಯವಿಲ್ಲ" ಎಂದು ಆರೋಪಿಸಿದರು.