ಬೆಂಗಳೂರು, ಸೆ. 16 (DaijiworldNews/AA): ಮಲ್ಟಿಪ್ಲೆಕ್ಸ್ಗಳಲ್ಲಿ ಏಕರೂಪ ದರ ನಿಗದಿ ವಿಚಾರಕ್ಕೆ ಸಂಬಂಧಿಸಿದಂತೆ ಮಧ್ಯಂತರ ಆದೇಶವನ್ನ ಹೈಕೋರ್ಟ್ ಕಾಯ್ದಿರಿಸಿದೆ.

200 ರೂ.ಗೆ ಚಿತ್ರ ಪ್ರದರ್ಶನ ಮಾಡಿದ್ರೆ ನಷ್ಟ ಉಂಟಾಗುತ್ತೆ ಎಂದು ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಅರ್ಜಿ ಸಲ್ಲಿಸಿತ್ತು. ಇಂದು ಈ ಅರ್ಜಿ ವಿಚಾರಣೆ ಹೈಕೋರ್ಟ್ನಲ್ಲಿ ನಡೆದಿದ್ದು, ಮಲ್ಟಿಪ್ಲೆಕ್ಸ್ಗಳ ಪರವಾಗಿ ಮುಕುಲ್ ರೋಹ್ಟಗಿ ವಾದ ಮಂಡಿಸಿದ್ದರು.
ಸಂವಿಧಾನದ ಸಮಾನತೆ, ಅಭಿವ್ಯಕ್ತಿ ಸ್ವಾತಂತ್ರ್ಯ ಉಲ್ಲಂಘನೆಯಾಗಿದೆ. 2017ರಲ್ಲಿಯೂ ಸರ್ಕಾರ ಇದೇ ರೀತಿಯ ಆದೇಶ ಹೊರಡಿಸಿದ್ದಾಗ ಹೈಕೋರ್ಟ್ ರದ್ದುಪಡಿಸಿತ್ತು. ಟಿಕೆಟ್ ಖರೀದಿಸಿ ಚಿತ್ರ ನೋಡುವುದು ಗ್ರಾಹಕನಿಗೆ ಬಿಟ್ಟದ್ದು, ಈ ವಿಚಾರದಲ್ಲಿ ಸರ್ಕಾರ ಮಧ್ಯಪ್ರವೇಶ ಮಾಡುವಂತಿಲ್ಲ ಎಂದು ಅವರು ವಾದ ಮಂಡಿಸಿದರು.
ಹೊಂಬಾಳೆ ಫಿಲಂಸ್ ಪರ ವಾದ ಮಂಡಿಸಿದ ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ ಅವರು, "ಜಿಎಸ್ಟಿ ಹೊರತುಪಡಿಸಿದ ಟಿಕೆಟ್ ದರ 200 ರೂ. ನಿಗದಿಪಡಿಸಲಾಗಿದೆ. ಇದು ವಿವೇಚನೆಯಿಲ್ಲದೇ ಸರ್ಕಾರ ಕೈಗೊಂಡ ನಿರ್ಧಾರ. ಸಿನಿಮಾ ನಿರ್ಮಿಸಲು ಎಷ್ಟೆಲ್ಲಾ ಶ್ರಮ, ಬಂಡವಾಳ ಬೇಕಾಗುತ್ತದೆ. ಅಂಕಿ ಅಂಶ ಸಂಗ್ರಹಿಸದೇ ಸರ್ಕಾರದ ಸ್ವೇಚ್ಚೆಯ ನಿರ್ಧಾರವಾಗಿದೆ" ಎಂದು ವಾದಿಸಿದರು.