ಕೊಪ್ಪಳ, ಸೆ. 17 (DaijiworldNews/AK):ದಲಿತ ಮಹಿಳೆಯ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂಬ ಆರೋಪದ ಮೇಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಈ ಕುರಿತು ಕೊಪ್ಪಳ ನಗರದ ದಲಿತ ಸಂಘಟನೆಯ ಯುವ ಮುಖಂಡ ಮಲ್ಲಿಕಾರ್ಜುನ ಪೂಜಾರ ಅವರು ದೂರು ದಾಖಲಿಸಿದ್ದು, ಯತ್ನಾಳ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ. ದೂರಿನನ್ವಯ ಕೊಪ್ಪಳ ನಗರ ಠಾಣೆಯಲ್ಲಿ SC/ST ಕಾಯ್ದೆಯಡಿ ಜಾತಿನಿಂದನೆ ಪ್ರಕರಣ ದಾಖಲಾಗಿದೆ
ಕಳೆದ ಎರಡು ದಿನಗಳ ಹಿಂದೆ ಯತ್ನಾಳ್ ಅವರು ಮಾಧ್ಯಮಗಳೊಂದಿಗೆ ಮಾತನಾಡುವ ಸಂದರ್ಭದಲ್ಲಿ, ಹಿಂದೂಗಳ ನಾಡಹಬ್ಬ ಮೈಸೂರು ದಸರಾ ಉದ್ಘಾಟನೆ ಮಾಡಲಿರುವ ಬಾನು ಮುಷ್ತಾಕ್ ವಿರುದ್ಧ ಮಾತನಾಡುವ ಭರಾಟೆಯಲ್ಲಿ ಸನಾತನ ಧರ್ಮದವರು ಮಾತ್ರ ತಾಯಿ ಚಾಮುಂಡಿಗೆ ಹೂ ಮುಡಿಸಬೇಕು ಹೊರತು ಒಬ್ಬ ದಲಿತ ಮಹಿಳೆಗೂ ಅವಕಾಶ ಕೊಡಲ್ಲ ಎಂದು ಹೇಳಿಕೆ ನೀಡಿ ದಲಿತ ಮಹಿಳೆಯರಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.