ಬೆಂಗಳೂರು,ಸೆ. 24 (DaijiworldNews/AK): ಕಾಂಗ್ರೆಸ್ ಸರ್ಕಾರ ರಸ್ತೆ ಗುಂಡಿಗಳನ್ನು ಮುಚ್ಚುವಲ್ಲಿ ಸಂಪೂರ್ಣ ನಿರ್ಲಕ್ಷ್ಯ ವಹಿಸಿರುವುದನ್ನು ವಿರೋಧಿಸಿ ಇಂದು ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಬನಶಂಕರಿಯ ಕಾಮಾಕ್ಯ ಲೇಔಟ್ ಬಳಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ನೇತೃತ್ವದಲ್ಲಿ ಸಂಚಾರ ತಡೆ ಚಳವಳಿ ನಡೆಯಿತು.

ಶಾಸಕ ಎಲ್.ವಿ. ರವಿಸುಬ್ರಮಣ್ಯ ಮತ್ತು ಕಾರ್ಯಕರ್ತರು ರಸ್ತೆ ಸಂಚಾರ ತಡೆ ಚಳವಳಿಯಲ್ಲಿ ಭಾಗವಹಿಸಿದ್ದರು. ರಸ್ತೆ ಗುಂಡಿಗಳನ್ನು ಮುಚ್ಚಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ತ್ವರಿತವಾಗಿ ರಸ್ತೆ ಗುಂಡಿ ದುರಸ್ತಿಯ ಬಗ್ಗೆ ಕ್ರಮ ವಹಿಸುವಂತೆ ಆಗ್ರಹಿಸಿದರು.