ಬೆಂಗಳೂರು, ಸೆ. 24 (DaijiworldNews/AA): ಪದ್ಮಭೂಷಣ, ಹಿರಿಯ ಸಾಹಿತಿ ಎಸ್ಎಲ್ ಭೈರಪ್ಪ (94) ಅವರು ಹೃದಯಾಘಾತದಿಂದ ಮಧ್ಯಾಹ್ನ 2:30ಕ್ಕೆ ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಭೈರಪ್ಪ ಅವರು ಮರುವಿನ ಕಾಯಿಲೆ ಸಹ ಇತ್ತು. ಹೀಗಾಗಿ ಅವರು 3 ತಿಂಗಳಿನಿಂದ ಮೈಸೂರು ಬಿಟ್ಟು ಬೆಂಗಳೂರಿನಲ್ಲಿ ವಾಸವಾಗಿದ್ದರು.
ಕನ್ನಡ ಭಾಷೆಯಲ್ಲಿ ಪುಸ್ತಕಗಳನ್ನು ಬರೆದಿರುವ ಇವರ ಕೃತಿಗಳು ಇಂಗ್ಲಿಷ್ ಹಾಗೂ ಭಾರತೀಯ ಭಾಷೆಗಳಿಗೆ ಅನುವಾದಗೊಂಡು ಭಾರತದ ಸಾಹಿತ್ಯವಲಯದಲ್ಲಿ ಹೆಸರಾಗಿದ್ದಾರೆ. ಇವರ ಹಲವಾರು ಕಾದಂಬರಿಗಳು ಮರುಮುದ್ರಣಗಳನ್ನು ಕಂಡಿವೆ. ಇವರಿಗೆ ಭಾರತ ಸರ್ಕಾರವು 2023ನೇ ಸಾಲಿನಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.
ಇಂಗ್ಲಿಷ್ ಭಾಷೆಯೂ ಸೇರಿದಂತೆ ಭಾರತೀಯ ಹಲವು ಭಾಷೆಗಳಿಗೆ ಭೈರಪ್ಪನವರ ಕಾದಂಬರಿಗಳು ಅನುವಾದಗೊಂಡಿವೆ. ಗೃಹಭಂಗ, ವಂಶವೃಕ್ಷ, ನೆಲೆ, ಸಾಕ್ಷಿ, ನಾಯಿ ನೆರಳು, ತಬ್ಬಲಿಯು ನೀನಾದೆ ಮಗನೆ, ದಾಟು, ಧರ್ಮಶ್ರೀ, ಪರ್ವ, ಭಿತ್ತಿ ಮುಂತಾದವು ಜನಪ್ರಿಯ ಕೃತಿಗಳನ್ನು ಬರೆದು ಕನ್ನಡದ ಜನಪ್ರಿಯ ಬರಹಗಾರರಾಗಿದ್ದಾರೆ.