ನವದೆಹಲಿ, ಸೆ. 28 (DaijiworldNews/AA): ತಮಿಳುನಾಡಿನ ಕರೂರಿನಲ್ಲಿ ಸೆ. 27ರಂದು ನಟ, ರಾಜಕಾರಣಿ ದಳಪತಿ ವಿಜಯ್ ಅವರ ರ್ಯಾಲಿ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟ 39 ಮಂದಿಯ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಹಾಗೂ ಗಾಯಾಳುಗಳಿಗೆ ತಲಾ 50,000ರೂ. ನೀಡುವುದಾಗಿ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ತಮಿಳುನಾಡಿನ ಕರೂರಿನಲ್ಲಿ ನಡೆದ ರಾಜಕೀಯ ರ್ಯಾಲಿಯಲ್ಲಿ ಸಂಭವಿಸಿದ ದುರದೃಷ್ಟಕರ ಕಾಲ್ತುಳಿತ ಘಟನೆಯಲ್ಲಿ ಮೃತಪಟ್ಟವರ ಪ್ರತಿ ಕುಟುಂಬಕ್ಕೂ ಪಿಎಂಎನ್ಆರ್ಎಫ್ನಿಂದ 2 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಗಾಯಾಳುಗಳಿಗೆ 50,000ರೂ. ನೀಡಲಾಗುವುದು ಎಂದು ಎಕ್ಸ್ ಪೋಸ್ಟ್ ಹಂಚಿಕೊಂಡ ಪಿಎಂಒ ತಿಳಿಸಿದೆ.
ಇನ್ನು ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಅವರು ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ ಮತ್ತು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ ತಲಾ 1 ಲಕ್ಷ ರೂ. ಸಹಾಯಧನವನ್ನು ಘೋಷಿಸಿದ್ದರು. ಜೊತೆಗೆ ಮೃತರ ಕುಟುಂಬಕ್ಕೆ ತಲಾ 20 ಲಕ್ಷ ರೂಪಾಯಿ ಹಾಗೂ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಟಿವಿಕೆ ಪಕ್ಷದ ಸೋಶಿಯಲ್ ಮೀಡಿಯಾ ಖಾತೆ ಮೂಲಕ ದಳಪತಿ ವಿಜಯ್ ಪೋಸ್ಟ್ ಮಾಡಿದ್ದಾರೆ.