ಧಾರವಾಡ, ಅ. 05 (DaijiworldNews/AA): ರಾಜ್ಯದಲ್ಲಿ ಇಲ್ಲಿಯವರೆಗೂ ಶೇಕಡ 70ರಷ್ಟು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪೂರ್ಣಗೊಂಡಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.

ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಜದಲ್ಲಿ ಬಡವರ ಸ್ಥಿತಿ-ಗತಿ ಕುರಿತು ಮಾಹಿತಿ ಸಂಗ್ರಹಿಸಲು ಸಮೀಕ್ಷೆ ಕಾರ್ಯ ಕೈಗೊಳ್ಳಲಾಗಿದೆ. ಇನ್ನು ಶೇಕಡ 30ರಷ್ಟು ಸಮೀಕ್ಷೆ ಬಾಕಿ ಉಳಿದಿದೆ ಎಂದು ಹೇಳಿದರು.
ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ನಡೆಸಲಾಗುತ್ತಿರುವ ಸಮೀಕ್ಷೆ ಕಾರ್ಯ ಪೂರ್ಣಗೊಳ್ಳಲು ನಾಡಿದ್ದು ಕೊನೆಯ ದಿನವಾಗಿದೆ. ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಶಿಕ್ಷಕರು ಸಮೀಕ್ಷೆ ಕಾರ್ಯದಲ್ಲಿ ತೊಡಗಿದ್ದು, ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಸರ್ಕಾರ ವಿವಿಧ ಕಾರ್ಯಕ್ರಮಗಳನ್ನು ರೂಪಿಸಿದೆ.