ಬೆಂಗಳೂರು, ಅ. 08 (DaijiworldNews/AK): ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಸಲ್ಲಿಸುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಹೀಗಾಗಿ ಮಹತ್ವದ ನಿರ್ಧಾರ ಕೈಗೊಂಡಿರುವ ರಾಜ್ಯ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಹಾಕುವ ಪ್ರಕ್ರಿಯೆಯನ್ನೇ ಕೈಬಿಟ್ಟಿದೆ.

ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಹೊಸ ನಿಯಮ ಜಾರಿಗೊಳಿಸಲಾಗುತ್ತಿದ್ದು, ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸುವ ಪ್ರಕ್ರಿಯೆಯನ್ನೇ ಕೈಬಿಟ್ಟಿದೆ. ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಮಾಹಿತಿ ನೀಡಿದ್ದಾರೆ.
ರಾಜ್ಯೋತ್ಸವ ಪ್ರಶಸ್ತಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸಲಹಾ ಸಮಿತಿ ಹಾಗೂ ಉನ್ನತ ಆಯ್ಕೆ ಸಮಿತಿ ರಚಿಸಿ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಲು ಸರ್ಕಾರ ನಿರ್ಧರಿಸಿದೆ. ಸಮಿತಿಯಿಂದ ಆಯ್ಕೆಯಾದ ಸಾಧಕರಿಗೆ ಮಾತ್ರ ಪ್ರಶಸ್ತಿ ನೀಡಲು ಸರ್ಕಾರ ನಿರ್ಧರಿಸಿದೆ.
ಇನ್ನೂ ಈ ಬಾರಿ 70 ಜನ ಅರ್ಹ ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ಸರ್ಕಾರದ ನಿರ್ಧಾರ ಮಾಡಿದೆ. ಈಗಾಗಲೇ ಇಲಾಖೆಗೆ ಸಲ್ಲಿಕೆಯಾಗಿರುವ ಸ್ವಯಂ ಅರ್ಜಿಗಳನ್ನು ಸಹ ಪ್ರಶಸ್ತಿ ಸಲಹಾ ಸಮಿತಿ ಮುಂದೆ ಮಂಡಿಸಲು ನಿರ್ಧರಿಸಲಾಗಿದೆ.