ಪಾಟ್ನಾ, ನ. 19 (DaijiworldNews/AA): ಬಿಹಾರದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟ ಬಹುಮತ ಗಳಿಸಿತ್ತು. ಇದೀಗ 10ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ನವೆಂಬರ್ 20ರಂದು ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಎನ್ಡಿಎ ಮೈತ್ರಿಕೂಟದೊಳಗೆ ಸಭೆಗಳು ನಡೆಯುತ್ತಿದ್ದು, ಸಚಿವ ಸಂಪುಟ ಹಂಚಿಕೆ ಕುರಿತು ಚರ್ಚೆಗಳು ನಡೆಯುತ್ತಿವೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವರು ಸೇರಿದಂತೆ ಎನ್ಡಿಎಯ ಹಲವು ಪ್ರಮುಖ ನಾಯಕರು ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.
ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ 10 ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ಲಾಲು ಪ್ರಸಾದ್ ಯಾದವ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪ್ರಮಾಣವಚನ ಸ್ವೀಕರಿಸುವ ಒಂದು ದಿನ ಮೊದಲು, ನವೆಂಬರ್ 19 ರಂದು ಕುಮಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಗುವುದು ಎಂದು ಜೆಡಿಯು ಮೂಲಗಳಿಂದ ತಿಳಿದುಬಂದಿದೆ.